ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಆಡಳಿತ ಪಕ್ಷದ ಶಾಸಕರಿಗೆ 50 ಕೋಟಿ ಅನುದಾನ ನೀಡಿದ್ದ ಸಿಎಂ ಸಿದ್ದರಾಮಯ್ಯ ಕೊನೆಗೂ ವಿಪಕ್ಷದ ಶಾಸಕರಿಗೆ ತಲಾ ರೂ. 25 ಕೋಟಿ ಮಂಜೂರು ಮಾಡಿ ಆದೇಶ ಮಾಡಿದ್ದಾರೆ.
ಮುಖ್ಯಮಂತ್ರಿ ಅವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಅನುದಾನ ಮಂಜೂರು ಮಾಡಲಾಗಿದೆ. ಕೆಲ ತಿಂಗಳ ಹಿಂದೆ ಕೇವಲ ಕಾಂಗ್ರೆಸ್ ಶಾಸಕರಿಗೆ ಮಾತ್ರ ಸರ್ಕಾರ ಅನುದಾನ ನೀಡಿದ್ದರು. ಆದರೆ ವಿಪಕ್ಷ ಶಾಸಕರಿಗೆ ಅನುದಾನ ಕೊಡದೆ ತಾರತಮ್ಯ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ವಿಪಕ್ಷಗಳ ಕೆಂಗಣ್ಣಿಗೆ ಸರ್ಕಾರ ಗುರಿಯಾಗಿತ್ತು.
ಇದೀಗ ವಿಪಕ್ಷಗಳ ಶಾಸಕರಿಗೂ ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಅಡಿ ಬರುವ ರಸ್ತೆ, ಸೇತುವೆ ಹಾಗೂ ನಗರಾಭಿವೃದ್ಧಿ ಇಲಾಖೆ ಅಡಿ ಬರೋ ನಗರ ಪ್ರದೇಶ ಕಾಮಗಾರಿಗಳಿಗೆ 18.75 ಕೋಟಿ ರೂ. ಬಿಡುಗಡೆ ಹಾಗೂ ವಿವೇಚನಾಧಿಕಾರದಡಿ ವಿಧಾನಸಭೆ ಸದಸ್ಯರು ಆಯ್ಕೆ ಮಾಡಬಹುದಾದ ಇತರ ಇಲಾಖೆ ಕಾಮಗಾರಿಗಳಿಗೆ 6.25 ಕೋಟಿ ರೂ. ಬಿಡುಗಡೆ ಸೇರಿ ಒಟ್ಟು 25 ಕೋಟಿ ರೂ. ಅನುದಾನ ಬಿಡುಗಡೆಗೆ ಸಿಎಂ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.