ಜಾತಿ ಜನಗಣತಿ ವರದಿ ಸ್ವೀಕರಿಸಲು ಸಿಎಂ ಸಿದ್ದರಾಮಯ್ಯ ನಿರ್ಧಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಾತಿ ಜನಗಣತಿ ವರದಿ ಸ್ವೀಕರಿಸಲು ಸಿಎಂ ಸಿದ್ದರಾಮಯ್ಯ ನಿರ್ಧಾರ ತೆಗೆದುಕೊಂಡಿದ್ದಾರೆ.

ಏನಿದು ಜಾತಿ ಜನಗಣತಿ ವರದಿ?

ಈ ಹಿಂದೆ ಜಾತಿ ಜನಗಣತಿ ವರದಿ ಭಾರಿ ಚರ್ಚೆಯಾಗಿತ್ತು. 2013ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಜಾತಿ ಜನಗಣತಿ ಶುರು ಮಾಡಿಸಿದ್ದರು. ಇದನ್ನು 2015ರ ಏಪ್ರಿಲ್-ಮೇ ತಿಂಗಳಿನಲ್ಲಿ ನಡೆಸಲಾಗಿತ್ತು.

ಈ ಜಾತಿ ಜನಗಣತಿ ಸಮೀಕ್ಷಾ ವರದಿ ತಯಾರಿಸಲು 162 ಕೋಟಿ ರೂ ವೆಚ್ಚ ಮಾಡಲಾಗಿತ್ತು. ಆದರೆ ಆಗ ವರದಿ ಸೋರಿಕೆಯಾಗಿ ಭಾರಿ ಚರ್ಚೆಗೆ ಎಡೆಮಾಡಿಕೊಟ್ಟಿತ್ತು. ಆ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗವು ಇದುವರೆಗೂ ಸರ್ಕಾರಕ್ಕೆ ಸಲ್ಲಿಸಿಲ್ಲ.

ಕರ್ನಾಟಕದಲ್ಲಿ ನಡೆದಿರುವ ಜಾತಿಗಣತಿ ವರದಿಯನ್ನು ಆಯೋಗವು ಸರ್ಕಾರಕ್ಕೆ ಸಲ್ಲಿಸಲು ನಿರ್ದೇಶನ ನೀಡಬೇಕೆಂದು ಮತ್ತೆ ಕೆಲವರು ಅರ್ಜಿಹಾಕಿದ್ದು, ಅದು ವಿಚಾರಣೆಯಲ್ಲಿದೆ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ ಜಾತಿ ಜನಗಣತಿ ವರದಿ ಸ್ವೀಕರಿಸಲು ನಿರ್ಧರಿಸಿದ್ದು, ವರದಿ ಸ್ವೀಕರಿಸಿ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲು ಸಜ್ಜಾಗಿದ್ದಾರೆ. ಅನುಮೋದನೆ ಬಳಿಕವೇ ವರದಿಯನ್ನು ಬಹಿರಂಗ ಪಡಿಸಲಿದ್ದಾರೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!