Wednesday, October 22, 2025

ಹಾಸನಾಂಬೆ ದೇವಿ ದರುಶನ ಪಡೆದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಎಂ ಸಿದ್ದರಾಮಯ್ಯ ಹಾಸನದ ಅಧಿದೇವತೆ ಹಾಸನಾಂಬೆ ದೇವಿ ದರುಶನವನ್ನು ಪಡೆದರು.

ಮಂಗಳವಾರ ಡಿಸಿಎಂ ಡಿಕೆ ಶಿವಕುಮಾರ್ ದರ್ಶನ ಪಡೆದ ಬೆನ್ನಲ್ಲೇ ಬುಧವಾರ ಬೆಳಗ್ಗೆ 12ರ ಸುಮಾರಿಗೆ ಸಿಎಂ ಸಿದ್ದರಾಮಯ್ಯ ಹಾಸನಾಂಬೆ ದೇವಿ ದರುಶನ ಪಡೆದರು.

ಜಿಲ್ಲಾಡಳಿತ ವ್ಯವಸ್ಥೆ ಮಾಡಿದ ಶಿಷ್ಟಾಚಾರದ ವಾಹನದಲ್ಲೇ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಸ್ವಾಗತಿಸಿದರು. ಸಿಎಂ ಬರುತ್ತಿದ್ದಂತೆ ಜಾನಪದ ಕಲಾತಂಡಗಳು ಜಗ್ಗಲಿಗೆ ಬಾರಿಸಿ, ಕೊಂಬು ಕಂಸಾಳೆ ಊದಿ ಸ್ವಾಗತ ಮಾಡಿಕೊಂಡರು. ಸಿದ್ದರಾಮಯ್ಯ ಅವರ ಜೊತೆ ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಆಗಮಿಸಿದ್ದರು. ಬಳಿಕ ಜಿಲ್ಲಾಡಳಿತ ಸಿಎಂ ಅವರನ್ನು ಮಂಗಳವಾದ್ಯಗಳೊಂದಿಗೆ ದೇವಿ ದರ್ಶನಕ್ಕೆ ಕರೆದೊಯ್ಯಿತು.

error: Content is protected !!