ಸಿಎಂ ಸಿದ್ದರಾಮಯ್ಯಗೆ ಮಂಡಿ ನೋವು, ಎರಡು ದಿನ ವಿಶ್ರಾಂತಿಗೆ ವೈದ್ಯರ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿ ನೋವಿನ ಕಾರಣ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿದ್ದಾರೆ. ಹೀಗಾಗಿ, ಇಂದು ನಿಗದಿಯಾಗಿದ್ದ ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರವಾಸ ರದ್ದಾಗಿದೆ.

ಸಿಎಂ ಸಿದ್ದರಾಮಯ್ಯಗೆ ಎಡಗಾಲಿನ ಮಂಡಿ ನೋವು ಹೆಚ್ಚಾಗಿದೆ. ಹೀಗಾಗಿ ಸದ್ಯ ಅವರು ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. 2 ದಿನ ಪ್ರಯಾಣ ಮಾಡದೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!