ಸಿಎಂ ಸಿದ್ದರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಬಳ್ಳಾರಿಯಲ್ಲಿ ಹೊಸ ಬಾಂಬ್ ಸಿಡಿಸಿದ ರೆಡ್ಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

13 ವರ್ಷಗಳ ಬಳಿಕ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿಗೆ ಆಗಮಿಸಿದ್ದಾರೆ. ಜಿಲ್ಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ 5 ಸಾವಿರ ಕೋಟಿ ರೂ. ಬೇನಾಮಿ ಆಸ್ತಿಯ ಬಾಂಬ್ ಸಿಡಿಸಿದ್ದಾರೆ.

ಬಳ್ಳಾರಿಯಲ್ಲಿಂದು ಮಾತನಾಡಿರುವ ರೆಡ್ಡಿ, ಸಿದ್ದರಾಮಯ್ಯ 5 ಸಾವಿರ ಕೋಟಿ ರೂ. ಬೇನಾಮಿ ಆಸ್ತಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಕುಟುಂಬಸ್ಥರು, ಸಂಬಂಧಿಕರ ಮೂಲಕ ಐದು ಸಾವಿರ ಕೋಟಿ ರೂ. ಆಸ್ತಿ ಬೇನಾಮಿಯಾಗಿ ಮಾಡಿದ್ದಾರೆ. ಇದೆಲ್ಲ ತನಿಖೆ ಆಗಬೇಕು ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯ ಹಿಂದೆ ಮಾಡಿದ್ದನ್ನ ಈಗ ಅನುಭವಿಸಬೇಕಾಗಿದೆ. ಮೂಡಾ ಪ್ರಕರಣದಲ್ಲಿ ಕೇವಲ ಹದಿನಾಲ್ಕು ಸೈಟು, 62 ಕೋಟಿ ವಿಚಾರ ಅಲ್ಲ. ಹಿಂದೆ ಅಡ್ವಾಣಿ ಅವರು ಯಡಿಯೂರಪ್ಪ ಹಾಗೂ ನಮ್ಮೆಲರಿಗು ರಾಜಿನಾಮೆ ಕೊಡಲು ಒಂದೇ ಮಾತು ಹೇಳಿದಾಗ ನಾವೆಲ್ಲಾ ರಾಜಿನಾಮೆ ಕೊಟ್ಟು ಸರ್ಕಾರವನ್ನೇ ವಿಸರ್ಜನೆ ಮಾಡಿದ್ದೆವು. ಈಗ ಕಾಂಗ್ರೆಸ್‌ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ವಾಗ್ದಾಳಿ ನಡೆಸಿದರು.

ಬಳ್ಳಾರಿಯಲ್ಲಿ ಹಲವು ಸ್ಟೀಲ್ ಕಂಪನಿಗಳು ಬರಬೇಕಿತ್ತು. ಆದ್ರೆ ಸಿದ್ದರಾಮಯ್ಯ ಅದಕ್ಕೆ ಕಲ್ಲು ಹಾಕಿ, ಜನರ ಉದ್ಯೋಗ ಕಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟಿ ಕೋಟಿ ಹಣ ಲೂಟಿ ಆಗಿದೆ. ಸಿದ್ದರಾಮಯ್ಯ ಸದನದಲ್ಲಿ 180 ಕೊಟಿ ಅಲ್ಲ 82 ಕೋಟಿ ರೂ. ಎಂದು ಒಪ್ಪಿಕೊಂಡಿದ್ದಾರೆ.. ಇಲ್ಲಿ ಕೇವಲ ನಾಗೇಂದ್ರ ಮಾತ್ರ ಅಲ್ಲ, ಇಡೀ ಸರ್ಕಾರ ಭಾಗಿಯಾಗಿದೆ ಎಂದು ಆರೋಪಿಸಿದರು.

ಬಳ್ಳಾರಿಯಿಂದ ದೂರ ಇದ್ದು ನೋವು ಅನುಭವಿಸಿದ್ದೇನೆ. ಇವತ್ತು ನನ್ನ ಹುಟ್ಟೂರಿಗೆ ಮರಳಿದೆ ಎನ್ನುವ ಖುಷಿ ಇದೆ. ಬಳ್ಳಾರಿ ಜನರಿಗೆ ಎಂದೆಂದಿಗೂ ಚಿರರುಣಿಯಾಗಿರುವೆ. ಆ ದೇವರಿಗೆ ನಾನು ಒಂದೇ ಪ್ರಾರ್ಥನೆ ಮಾಡಿದ್ದೆ. ಬಳ್ಳಾರಿಗೆ ಹೋಗಿ ಜನಸೇವೆ ಮಾಡ್ಬೇಕೆಂದು ಪ್ರಾರ್ಥಿಸಿದ್ದೆ. ಸುಳ್ಳು ಆರೋಪ ಮಾಡಿ ನನ್ನ ತುಳಿಯುವ ಕೆಲಸ ಮಾಡಿದ್ರು. ಬಳ್ಳಾರಿಯನ್ನ ಅಭಿವೃದ್ಧಿ ಮಾಡುವುದು ನನ್ನ ಕೆಲಸ . ಇಲ್ಲಿನ ಜನರಿಗೆ ಉದ್ಯೋಗ ಸಿಗುವಂತೆ ಕೆಲಸ ಮಾಡುವೆ ಎಂದು ಭರವಸೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!