ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಗ್ರಾಮೀಣ ಭಾಗದ ವಿಧಾನಸಭಾ ಕ್ಷೇತ್ರಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 10 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ.
2024-25ನೇ ಸಾಲಿನಲ್ಲಿ ರಾಜ್ಯದಲ್ಲಿ ಸುರಿದ ಮಳೆ ಮತ್ತು ಪ್ರವಾಹದಿಂದಾಗಿ ಹಾನಿಗೊಳಗಾದ ಗ್ರಾಮೀಣ ರಸ್ತೆ, ಸೇತುವೆ ಮತ್ತು ಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲು ರಾಜ್ಯದ ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಿಗೆ (Assembly Constituencies) ಸರ್ಕಾರದಿಂದ ತಲಾ 10 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ.
ಗ್ರಾಮೀಣ ಭಾಗದ 189 ವಿಧಾನಸಭಾ ಕ್ಷೇತ್ರಗಳಲ್ಲಿ ರಸ್ತೆಗಳು ತೀವ್ರ ಹಾನಿಯಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ ರಾಜ್ಯದ 189 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಿಗೆ ತಲಾ 10 ಕೋಟಿಗಳಂತೆ ಒಟ್ಟು 1,890 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ.
ಮಳೆ ಹಾನಿಗೆ ಒಳಗಾದ ರಸ್ತೆ ಸೇತುವೆ ಮತ್ತು ಚರಂಡಿ ಕಾಮಗಾರಿ ಕೈಗೊಳ್ಳಲು ಹಣ ಬಿಡುಗಡೆ ಮಾಡಲಾಗಿದ್ದು, ನಿಗದಿತ ಕಾಮಗಾರಿಗಳಿಗಷ್ಟೇ ಬಳಸುವಂತೆ ಸೂಚನೆ ಸಹ ನೀಡಲಾಗಿದೆ.