ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ ಬೆನ್ನಲ್ಲೇ ಸಿದ್ದರಾಮ್ಯ ಇಂದು ಎರಡು ಮಹತ್ವದ ಸಭೆ ನಡೆಸಲಿದ್ದಾರೆ.
ಇಂದು ಬೆಳಗ್ಗೆ 11ಗಂಟೆಗೆ ಸಚಿವ ಸಚಿವ ಸಂಪುಟ ಸಭೆ ನಡೆಸಿದರೆ ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆಯನ್ನು ಕರೆದಿದ್ದಾರೆ. ಈಗಾಗಲೇ ಶಾಸಕರುಗಳಿಗೂ ಸಿಎಲ್‌ಪಿ ಕಾರ್ಯದರ್ಶಿ ಮಾಹಿತಿ ರವಾನಿಸಿದ್ದು ತಪ್ಪದೇ ಸಭೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ಈ ಸಭೆಯಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿದ ಅನುಮತಿಗೆ ಕ್ಯಾಬಿನೆಟ್‌ನಲ್ಲಿ ಖಂಡನೆ ವ್ಯಕ್ತಪಡಿಸಿ ಪ್ರಕರಣದಲ್ಲಿ ಸಿಎಂ ಅವರನ್ನು ಬೆಂಬಲಿಸಲು ಶಾಸಕರಿಂದ ಒಕ್ಕೊರಲ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆಯಿದೆ.