ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವ ಬಗ್ಗೆ ಯಾರೂ ಬಹಿರಂಗ ಹೇಳಿಕೆ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕರು ಹಾಗೂ ಸಚಿವರಿಗೆ ಎಚ್ಚರಿಕೆ ನೀಡಿದ್ದಾರೆ.
ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಹೇಳಿಕೆ ನೀಡಲು ಆರಂಭಿಸಿದ್ದ ಸಚಿವ ಕೆಎನ್ ರಾಜಣ್ಣ ಜತೆ ಸಿದ್ದರಾಮಯ್ಯ ದೂರವಾಣಿ ಮೂಲಕ ಮಾತುಕತೆ ನಡೆಸಿ ಎಚ್ಚರಿಕೆ ನೀಡಿದ್ದಾರೆ. ಬಹಿರಂಗ ಹೇಳಿಕೆಗಳಿಂದ ಸರ್ಕಾರ ಮತ್ತು ಪಕ್ಷಕ್ಕೆ ತೊಂದರೆಯಾಗಿದೆ. ಹಾಗಾಗಿ ಡಿಸಿಎಂ ಹುದ್ದೆ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.