ಗದಗಿನ ಕನ್ನಡ ರಥದ ಮೆರವಣಿಗೆಯಲ್ಲಿ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ವರದಿ ಗದಗ:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಕನ್ನಡ ಸಂಭ್ರಮ-50” ರ ಅದ್ಧೂರಿ ಕಾರ್ಯಕ್ರಮಕ್ಕಾಗಿ ಗದಗ ಪ್ರವೇಶಿಸಿ ವೀರನಾರಾಯಣ ದೇವಸ್ಥಾನದಲ್ಲಿ ನಾರಾಯಣನ ದರ್ಶನ ಪಡೆದರು.

ಬಳಿಕ ಕನ್ನಡ ರಥದ ಮೆರವಣಿಗೆಯಲ್ಲಿ ಸಹಸ್ರ ಸಹಸ್ರ “ಅರಿಶಿನ-ಕುಂಕಮ” ಬಣ್ಣದ ಬಾವುಟಗಳು, ಕಲಶಗಳು ಮತ್ತು ಕನ್ನಡ ಶಾಲುಗಳನ್ನು ಹೊದ್ದ ಕನ್ನಡ ಕಾರ್ಯಕರ್ತರ ಜಯಘೋಷಗಳ ನಡುವೆ ಮೆರವಣಿಗೆಯಲ್ಲಿ ತೆರಳಿದರು.

ಗದಗಿನ ಮುಖ್ಯರಸ್ತೆಗಳಲ್ಲಿ ಸಾಗಿದ ಕನ್ನಡ ರಥವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿಮಾನಿಗಳು, ಕಾರ್ಯಕರ್ತರು ಹೂಮಳೆಗರೆದು ಸ್ವಾಗತಿಸಿದರು.

ಹಾದಿಯುದ್ದಕ್ಕೂ ಮನೆಗಳ ಮುಂದೆ ಕನ್ನಡದ ರಂಗೋಲಿ, ಬಾವುಟಗಳು ಕಣನ ಸೆಳೆಯುತ್ತಿದ್ದರೆ ಮಹಿಳೆಯರು, ಮಕ್ಕಳು ರಥಕ್ಕೆ ಹೂಮಳೆ ಗರೆಯುತ್ತಾ, ರಥದ ಚಕ್ರಗಳಿಗೆ ಹಣ್ಣು ಕಾಯಿ, ಹಾಲಿನ ಅಭಿಷೇಕ ನಡೆಸುತ್ತಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ.ಪಾಟೀಲ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಮಂಕಳ ವೈದ್ಯ ಸೇರಿ ಹಲವು ಮುಖಂಡರು ಮೆರವಣಿಗೆಯಲ್ಲಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!