ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಯುಕ್ತ ಬೆಂಗಳೂರಿನ ಎಂ.ಜಿ ರಸ್ತೆ ಬಳಿಯ ಗಾಂಧಿ ಪ್ರತಿಮೆ ಬಳಿ ಜಾಥಾಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ಜಾಥಾಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ , ಯಾರಾದ್ರೂ ಬಾಲ ಕಾರ್ಮಿಕರನ್ನು ಕಂಡರೆ ಕೆಲಸದಿಂದ ಬಿಡಿಸಿ, ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಗುಲಾಮಗರಿ ಮನಸ್ಥಿತಿಯಿಂದ ಹೊರ ಬರಬೇಕು ಎಂದು ಹೇಳಿದ್ದಾರೆ.
ಬಾಲಕಾರ್ಮಿಕರ ರಕ್ಷಣೆಗಾಗಿ ಜಗತ್ತಿನ ಗಮನ ಸೆಳೆಯಲು ವಿಶ್ವ ಕಾರ್ಮಿಕ ಸಂಘಟನೆಯು 2002 ರಲ್ಲಿ ಜೂನ್ 12 ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ಎಂದು ಘೋಷಿಸಿದೆ. ಬಾಲ ಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳು ಈ ಕೆಟ್ಟ ವ್ಯವಸ್ಥೆಯಿಂದ ಹೊರಬಂದು ತಮ್ಮ ಹಕ್ಕುಗಳ ಕುರಿತು ಜಾಗೃತಿ ಹೊಂದಿ ದೇಶದ ಉತ್ತಮ ನಾಗರಿಕರಾಗಬೇಕು ಎಂಬುದು ಈ ದಿನದ ಉದ್ದೇಶವಾಗಿದೆ.