ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡಲು ಡೇ ಕೇರ್ ಕಿಮೋಥರಪಿ ಘಟಕಗಳನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು.
ಇಂದು ಮೈಸೂರು ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಈ ಒಂದು ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಡೇ ಕೇರ್ ಕಿಮೋಥರಪಿ ಘಟಕಗಳ ಲೋಕಾರ್ಪಣೆಗೊಳಿಸಲಾಯಿತು. ಈ ಒಂದು ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಹಲವರು ಈ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಕರ್ನಾಟಕದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಆರಂಭವಾಗಲಿವೆ. ಇನ್ಮುಂದೆ ಜಿಲ್ಲಾ ಆಸ್ಪತ್ರೆಗಳಲ್ಲೂ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯಬಹುದು. ಪ್ರತಿ ವರ್ಷ ಹೊಸದಾಗಿ 70 ಸಾವಿರ ಕ್ಯಾನ್ಸರ್ ಪ್ರಕರಣ ದಾಖಲಾಗುತ್ತಿದೆ. ಬಡವರು ಕಡಿಮೆ ವೆಚ್ಚದಲ್ಲಿ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯಬೇಕು ಅಂದರೆ ಬೆಂಗಳೂರಿನ ಕಿದ್ವಾಯಿ ಅಂತಹ ಸಂಸ್ಥೆಗಳಿಗೆ ಬರಬೇಕು. ಇದೂ ಕೂಡ ಕಷ್ಟದ ಕೆಲಸ. ಹಾಗಾಗಿ ಬಡವರಿಗೆ ಅನುಕೂಲ ಆಗಲಿ ಎಂದು 16 ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಓಪನ್ ಮಾಡಲಾಗಿದೆ.