ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತೀ ವರ್ಷದಂತೆ ಈ ಬಾರಿಯೂ ಸ್ವಾತಂತ್ರ‍್ಯ ದಿನಾಚರಣೆ ಹಿನ್ನೆಲೆ ಲಾಲ್‌ಬಾಗ್‌ನಲ್ಲಿ ನಡೆಯಲಿರುವ 218ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು 218ನೇ ವರ್ಷದ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನವಾಗಿದೆ. ಈ ಬಾರಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣರಿಗೆ ಗೌರವ ಸಲ್ಲಿಸುವ ಕೆಲಸ ಆಗಿದೆ ಎಂದಿದ್ದಾರೆ.
ಕಿತ್ತೂರು ರಾಣಿ ಚೆನ್ನಮ್ಮಗೆ ಬ್ರಿಟಿಷರ ವಿರುದ್ಧ ಮೊದಲನೇ ಯುದ್ಧಗಳಲ್ಲಿ ಜಯ ಸಿಕ್ತು. ಎರಡನೇ ಯುದ್ಧದಲ್ಲಿ ಚೆನ್ನಮ್ಮನ ಸೆರೆಯಾಯಿತು. ಚೆನ್ನಮ್ಮನ ಬಲಗೈ ಬಂಟನಾಗಿದ್ದ ರಾಯಣ್ಣನಿಗೆ ನ್ಯಾಯಾಲಯದಲ್ಲಿ ಗಲ್ಲು ಶಿಕ್ಷೆ ಆಯಿತು. ರಾಯಣ್ಣ ಹುಟ್ಟಿದ್ದು ಸ್ವಾತಂತ್ರ‍್ಯ ಸಿಕ್ಕ ದಿನವಾದರೆ, ಗಲ್ಲು ಶಿಕ್ಷೆ ಆಗಿದ್ದು ಗಣರಾಜ್ಯದ ದಿನ. ಇದು ಕಾಕತಾಳೀಯ ಅಂತಾನೇ ಎನ್ನಬಹುದು ಎಂದು ಹೇಳಿದ್ದಾರೆ.
ಬ್ರಿಟಿಷರ ವಿರುದ್ಧ ರಾಯಣ್ಣ ವೀರಾವೇಶದಿಂದ ಹೋರಾಡಿದ್ದರು. ಬ್ರಿಟಿಷರನ್ನು ಸೋಲಿಸಿ 200 ವರ್ಷ ಆಯಿತು. ರಾಯಣ್ಣ ಹಿಂದುಳಿದ ಜಾತಿಗೆ ಸೇರಿದವರು, ಎಲ್ಲಾ ಸೈನ್ಯದಲ್ಲಿ ಎಲ್ಲ ಜಾತಿಯವರಿದ್ದರು. ಜಾತ್ಯಾತೀತರಾಗಿ ಎಲ್ಲರನ್ನೂ ಬಳಸಿಕೊಂಡು ಕಿತ್ತೂರು ಪ್ರಾಂತ್ಯ ಆಳಿದ್ದರು. ಚೆನ್ನಮ್ಮ ವೀರ ಮಹಿಳೆ ಹಾಗೂ ವೀರ ವನಿತೆಯೂ ಹೌದು. ಸರ್ಕಾರದಿಂದ ಕಿತ್ತೂರು ರಾಣಿ ಚೆನ್ನಮ್ಮನ ಜಯಂತಿ ಆಚರಣೆ ಮಾಡಲಾಗುತ್ತದೆ. ಸಂಗೊಳ್ಳಿ ರಾಜಣ್ಣ ಅವರ ಪ್ರಾಧಿಕಾರ ಮಾಡಿದ್ದೇವೆ ಎಂದಿದ್ದಾರೆ.