ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಿಎಂ ಸಿದ್ಧರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಸಚಿವರಾದ ಹೆಚ್.ಸಿ.ಮಹದೇವಪ್ಪ, ಜಿ.ಪರಮೇಶ್ವರ್ ಸೇರಿ ಹಲವರು ಉಪಸ್ಥಿತರಿದ್ದರು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತದಲ್ಲಿ ಗಾಯಗೊಂಡಿದ್ದರು. ಅವರ ಬೆನ್ನಿನ ಎರಡು ಮೂಳೆಗಳು ಮುರಿತವಾಗಿದ್ದವು. ಹೀಗಾಗಿ ಬೆಳಗಾವಿಯ ವಿಜಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.