ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆಯಲು ಸಿಎಂ ಸಿದ್ದರಾಮಯ್ಯ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕ್ರಮ ಕೈಗೊಂಡಿದ್ದಾರೆ. ಪ್ರಕರಣಗಳ ಕಡತವನ್ನು ಸಚಿವ ಸಂಪುಟ ಉಪ ಸಮಿತಿಯ ಮುಂದೆ ತಂದು ಅಗತ್ಯ ಕ್ರಮ ಕೈಗೊಂಡು, ಸಚಿವ ಸಂಪುಟದಲ್ಲಿ ಚರ್ಚೆಗೆ ತರುವಂತೆ ಗೃಹ ಸಚಿವರಿಗೆ (Home Minister) ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಕಾವೇರಿ, ಮೇಕೆದಾಟು ಪಾದಯಾತ್ರೆ ಸೇರಿದಂತೆ ನಾಡಿನ ಹಿತರಕ್ಷಣೆಗಾಗಿ ನಡೆದಿದ್ದ ಹೋರಾಟಗಳಲ್ಲಿ ದಾಖಲಾಗಿದ್ದ ಪ್ರಕರಣಗಳ ವಾಪಸ್ ಪಡೆಯುವಂತೆ ವಿಧಾನ ಪರಿಷತ್‌ ಸದಸ್ಯ ದಿನೇಶ್ ಗೂಳಿಗೌಡ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು.

ಅವರ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ಪ್ರಕರಣಗಳನ್ನು ಹಿಂಪಡೆಯುವ ವಿಚಾರವಾಗಿ ಸಚಿವ ಸಂಪುಟ ಉಪ ಸಮಿತಿಯ ಮುಂದೆ ಕಡತ ಮಂಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ನಂತರ ಸಚಿವ ಸಂಪುಟಕ್ಕೆ ಪ್ರಸ್ತಾವ ಸಲ್ಲಿಸಬೇಕು ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರಿಗೆ ಸೂಚನೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!