ಬಾಡಿಗೆದಾರರಿಗೂ ಗೃಹ ಜ್ಯೋತಿ ಅನ್ವಯಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಗೃಹಜ್ಯೋತಿ, ಉಚಿತ ವಿದ್ಯುತ್ ಯೋಜನೆಯು ಬಾಡಿಗೆದಾರರಿಗೂ ಅನ್ವಯಿಸುತ್ತಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಯೋಜನೆಯ ಕುರಿತು ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಿಎಂ, ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯಲು ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದ್ದು, ತೆರಿಗೆ ಪಾವತಿಸುವವರು ಹಾಗೂ ಜಿಎಸ್​​ಟಿ ನೋಂದಣಿ ಮಾಡಿಕೊಂಡಿರುವವರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ತಿಳಿಸಿದರು.

ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ ಯೋಜನೆಗೆ ಆನ್​ಲೈನ್, ಆಫ್​​ಲೈನ್​​ನಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು. ಗ್ರಾಮೀಣ ಭಾಗದಲ್ಲಿರುವವರು ನಾಡ ಕಚೇರಿಯಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಗೃಹಜ್ಯೋತಿ ಯೋಜನೆಯನ್ನು ಪಡೆಯಲು ಗ್ರಾಹಕರು ಸೇವಾ ಸಿಂಧು ವೆಬ್‌ಸೈಟ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. ಇದರ ಲಿಂಕ್​ ವೆಬ್​ಸೈಟ್​​ನಲ್ಲಿ ಶೀಘ್ರದಲ್ಲೇ ಸ್ಥಾಪಿಸಲಾಗುವುದು ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!