ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಪುಟ ಪುನಾರಚನೆ ಬಗ್ಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಚರ್ಚೆ ಮಾಡುತ್ತೇನೆ. ಇದಕ್ಕಾಗಿಯೇ ನವಂಬರ್ 15ಕ್ಕೆ ದೆಹಲಿಗೆ ಹೋಗುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂಬ ಬಿಹಾರ ಮುಖಂಡರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಪ್ರಶ್ನೆ ಕೇಳ್ತಿದ್ದಂತೆ ಮಾಧ್ಯಮಗಳ ವಿರುದ್ಧ ಗರಂ ಆದರು. ಯಾರು ಏನೇ ಹೇಳಿದ್ರೂ ಅದು ಮುಖ್ಯವಲ್ಲ. ಕಾಂಗ್ರೆಸ್ ಹೈಕಮಾಂಡ್ ಹೇಳುವುದಷ್ಟೇ ಮುಖ್ಯ. ಕಾಂಗ್ರೆಸ್ ಹೈಕಮಾಂಡ್ ಏನಾದ್ರೂ ಹೇಳಿದ್ಯಾ ಈ ಬಗ್ಗೆ? ಯಾಕೆ ಪದೆ ಪದೆ ಅದನ್ನೇ ಮಾತನಾಡ್ತೀರಾ. ಜನ ಮಾತನಾಡುತ್ತಿಲ್ಲ, ಮಾಧ್ಯಮದವರೇ ಪದೇ ಪದೇ ಮಾತನಾಡುತ್ತಿದ್ದಾರೆ ಅಂತ ಗರಂ ಆದರು.
ಕಾಂಗ್ರೆಸ್‌ಗೆ ಹೈಕಮಾಂಡ್ ಇದೆ. ಹೈಕಮಾಂಡ್ ಹೇಳುವುದು ಮಾತ್ರವೇ ಮುಖ್ಯ, ಅದೇ ಅಂತಿಮ. ನಾನು ಬಿಹಾರ ಚುನಾವಣೆ ಬಳಿಕ ರಾಹುಲ್ ಗಾಂಧಿ ಅವರನ್ನ ಭೇಟಿ ಮಾಡುತ್ತೇನೆ. ಸಂಪುಟ ಪುನಾರಚನೆ ಬಗ್ಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರೊಟ್ಟಿಗೆ ಚರ್ಚೆ ಮಾಡುತ್ತೇನೆ. ಇದಕ್ಕಾಗಿಯೇ ನವಂಬರ್ 15ಕ್ಕೆ ದೆಹಲಿಗೆ ಹೋಗುತ್ತಿದ್ದೇನೆ. ಪುನಾರಚನೆ ಬಗ್ಗೆ ಹೈಕಮಾಂಡ್ ಏನು ಹೇಳುತ್ತೋ ಆ ರೀತಿ ನಡೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ನ.15ಕ್ಕೆ ದೆಹಲಿಗೆ ಹೋಗ್ತಿದ್ದಾರೆ ಸಿಎಂ ಸಿದ್ದರಾಮಯ್ಯ, ಸಚಿವ ಸಂಪುಟ ಪುನಾರಚನೆ?

