October 17, 2026
Saturday, October 17, 2026
spot_img

ಬಿಹಾರ ಚುನಾವಣೆಗೆ ಸಿಎಂ ಸಿದ್ದರಾಮಯ್ಯ ಹಣ ಕೂಡಿಡ್ತಿದ್ದಾರೆ: ಶೆಟ್ಟರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚಿಗೆ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಆಯೋಜಿಸಿದ್ದ ಔತಣಕೂಟದ ಪ್ರಮುಖ ಉದ್ದೇಶ ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ಹಣ ಸಂಗ್ರಹಿಸುವುದಾಗಿತ್ತು ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಕಾಂಗ್ರೆಸ್ ಕರ್ನಾಟಕವನ್ನು ಚುನಾವಣೆಗೆ ಎಟಿಎಂ ಮಾಡಿಕೊಂಡಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವಲ್ಲಿ ವಿಫಲರಾಗಿದ್ದು, ಆಡಳಿತದಲ್ಲಿ ಆಸಕ್ತಿಯನ್ನೂ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದರು.

ಬಿಹಾರ ಚುನಾವಣೆಗೆ ಹಣವನ್ನು ಸಂಗ್ರಹಿಸಲು ಕಾಂಗ್ರೆಸ್ ಅವರನ್ನು ಕೇಳಿದೆ, ಆದ್ದರಿಂದ ಅವರು ಮಂತ್ರಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು. ಅದರಲ್ಲಿ ಪ್ರತಿಯೊಬ್ಬರಿಗೂ ಚುನಾವಣೆಗೆ ಹಣ ನೀಡುವಂತೆ ಕೇಳಿಕೊಂಡಿದ್ದಾರೆ ಎಂದರು.

Must Read