ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಸ್ಲಿಮರನ್ನು ಕರ್ನಾಟಕದ ಅತಿ ದೊಡ್ಡ ಸಮುದಾಯ ಎಂದು ಬಿಂಬಿಸಿ ಅವರಿಗೆ ಹೆಚ್ಚಿನ ಮೀಸಲಾತಿ ಹಾಗೂ ಇನ್ನುಳಿದ ಸವಲತ್ತುಗಳನ್ನು ನೀಡುವ ಹುನ್ನಾರವನ್ನು ಸಿಎಂ ನಡೆಸಿದ್ದಾರೆ ಎಂದು ಕರ್ನಾಟಕ ಬಿಜೆಪಿ ಕಿಡಿಕಾರಿದೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಸಿಎಂ ಸಿದ್ದರಾಮಯ್ಯ ಮುಸ್ಲಿಮರನ್ನು ಕರ್ನಾಟಕದ ಅತಿ ದೊಡ್ಡ ಸಮುದಾಯ ಎಂದು ಬಿಂಬಿಸಲು ಹೊರಟಿದ್ದಾರೆ.
ಜಾತಿಗಣತಿ ಎಂಬುದು ಓಲೈಕೆ ರಾಜಕಾರಣದ ಪಿತಾಮಹ ಸಿಎಂ ಸಿದ್ದರಾಮಯ್ಯ ಮತ್ತವರ ವಂಧಿಮಾಗದರು ಎಸಿ ರೂಂನಲ್ಲಿ ಕುಳಿತು ತಯಾರಿಸಿದ ವರದಿಯೇ ಹೊರತು, ಜನರ ಮನೆ ಬಾಗಿಲಿಗೆ ಹೋಗಿ ತಯಾರಿಸಿದ ವರದಿಯಲ್ಲ ಎಂದು ಹೇಳಿದೆ.