February 13, 2026
Friday, February 13, 2026
spot_img

ಸಾವಿರ ದಿನದಲ್ಲಿ ಸಾವಿರ ಹಗರಣಗಳ ಸರದಾರ ಸಿಎಂ ಸಿದ್ದರಾಮಯ್ಯ: ಅಶೋಕ್‌ ಗರಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಾವಿರ ದಿನದಲ್ಲಿ ಸಾವಿರಾರು ಹಗರಣಗಳ ಸರದಾರ ಸಿಎಂ ಸಿದ್ದರಾಮಯ್ಯ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ವ್ಯಂಗ್ಯವಾಡಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ರಾಜ್ಯದಲ್ಲಿ ಜನವಿರೋಧಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಸಿಎಂ ಸಿದ್ದರಾಮಯ್ಯರಿಂದ ಮುಡಾ ಹಗರಣ ನಡೆದಿದೆ. ಮುಡಾ ಹಗರಣದ ಮೂಲ ಪುರುಷ ಸಿದ್ದರಾಮಯ್ಯ ಆಗಿದ್ದು, ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. ಹಣ ನುಂಗಿದ್ದಾರೆ.

ಈ ವೇಳೆ ಸಚಿವರಾಗಿದ್ದ ನಾಗೇಂದ್ರ ರಾಜೀನಾಮೆ ಸಲ್ಲಿಸಿ, ಜೈಲಿಗೆ ಹೋಗಿದ್ದರು. ಅಬಕಾರಿ ಇಲಾಖೆಯಲ್ಲಿ 6 ಸಾವಿರ ಕೋಟಿ ರೂ. ಹಗರಣ ನಡೆದಿದ್ದು, ಇನ್ಸ್‌ಪೆಕ್ಟರ್‌ ಸೇರಿ ವಿವಿಧ ಹುದ್ದೆಗಳಿಗೆ ಹಣ ಫಿಕ್ಸ್ ಮಾಡಿ, ಈ ಸರ್ಕಾರ ಲೂಟಿ ಹೊಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !