ಬೇರೆ ರಾಜ್ಯಗಳಿಗಿಂತಲೂ ಕಡಿಮೆ…ಮತ್ತೆ ಹಾಲಿನ ಬೆಲೆ ಏರಿಕೆಗೆ ಸಿಎಂ ಸಿದ್ಧರಾಮಯ್ಯ ಸಮರ್ಥನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಂದಿನಿ ಹಾಲಿನ ಬೆಲೆಯಲ್ಲಿ 4 ರೂಪಾಯಿ ಏರಿಕೆ ಮಾಡಿ ಸಾಮಾನ್ಯ ಜನರ ಮೇಲೆ ರಾಜ್ಯ ಸರಕಾರ ಬರೆ ಎಳೆದಿದ್ದು, ಇತ್ತ ಬೆಲೆ ಏರಿಕೆ ಮಾಡಿದ್ದಕ್ಕೆ ಸಿಎಂ ಸಿದ್ಧರಾಮಯ್ಯ ಸಮರ್ಥನೆಗೆ ಇಳಿದಿದ್ದಾರೆ.

ಜನಾಕ್ರೋಶದ ನಡುವೆ ಟ್ವೀಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಮುಂಬರುವ ಏಪ್ರಿಲ್ 1ರಿಂದ ರಾಜ್ಯದಲ್ಲಿ ನಂದಿನಿ ಹಾಲಿನ ದರವು 4 ಹೆಚ್ಚಳವಾಗಲಿದ್ದು, ಇದರಲ್ಲಿ ಸರ್ಕಾರ ಅಥವಾ ಕೆಎಂಎಫ್ ಸಂಸ್ಥೆಗೆ ಲಾಭ ಗಳಿಕೆ ಮಾಡಿಕೊಡುವ ಯಾವುದೇ ಉದ್ದೇಶವಿಲ್ಲ. ಇಲ್ಲಿ ಏರಿಕೆಯಾಗುವ ದರದ ಲಾಭವು ರೈತರನ್ನು ತಲುಪಲಿದೆ. ದರ ಏರಿಕೆಯ ನಂತರವೂ ಒಂದು ಲೀಟರ್ ಹಾಲಿನ ಬೆಲೆ 46 ಆಗಲಿದ್ದು, ಇದು ಬೇರೆಲ್ಲಾ ರಾಜ್ಯಗಳಿಗಿಂತಲೂ ಕಡಿಮೆಯಿರಲಿದೆ. ನಾಡಿನ‌ ಲಕ್ಷಾಂತರ ಹೈನುಗಾರರ ಬದುಕಿಗೆ ಬಲ ತುಂಬುವ ಏಕೈಕ ಉದ್ದೇಶದ ಈ ಪ್ರಯತ್ನಕ್ಕೆ ಸಾರ್ವಜನಿಕರು ಬೆಂಬಲವಾಗಿ ನಿಲ್ಲುತ್ತೀರೆಂಬ ವಿಶ್ವಾಸ ನಮಗಿದೆ ಎಂದು ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!