ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ಕೊಪ್ಪಳ, ವಿಜಯನಗರ ಪ್ರವಾಸ ದಿಢೀರ್ ರದ್ದಾಗಿದೆ. ಕೊಪ್ಪಳ ಹಾಗೂ ವಿಜಯನಗರದಲ್ಲಿ ಸಿದ್ದರಾಮಯ್ಯ ಪ್ರವಾಸ ನಿಗದಿಯಾಗಿತ್ತು.
ಭರ್ಜರಿ ಮಳೆಯಿಂದ ಭರ್ತಿಯಾದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಸಿಎಂ ಬಾಗಿನ ಅರ್ಪಿಸಬೇಕಿತ್ತು ಆದರೆ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ. ಆದರೆ ನಿಗದಿಯಾಗಿದ್ದ ವಿಜಯನಗರ ಜಿಲ್ಲಾ ಪ್ರವಾಸವನ್ನು ಸಿಎಂ ಸಿದ್ದರಾಮಯ್ಯ ದಿಢೀರ್ ರದ್ದು ಮಾಡಿದ್ದು ಯಾಕೆ ಎನ್ನುವ ಪ್ರಶ್ನೆ ಜನರಲ್ಲಿ ಕಾಡಿದೆ.
ಮುಡಾ ಹಗರಣದ ಆರೋಪ ಹಾಗೂ ಬಿಜೆಪಿ- ಜೆಡಿಎಸ್ ಪಾದಯಾತ್ರೆಯಿಂದ ಸಿಎಂ ಸಿದ್ದರಾಮಯ್ಯ ವಿಚಲಿತರಾದ್ರಾ ಎನ್ನುವ ಅನುಮಾನಗಳು ಎದ್ದಿವೆ.
ತುಂಗಭದ್ರೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಚೇರಿ ದೃಢಪಡಿಸಿತ್ತು. ಆದರೆ ಮುಖ್ಯಮಂತ್ರಿಗಳು ಬರುವುದಕ್ಕೆ ಒಂದು ದಿನಕ್ಕೆ ಮೊದಲೇ ಕಾರ್ಯಕ್ರಮ ಮುಂದೂಡಿಕೆಯಾಗಿದೆ. ಈ ಬಗ್ಗೆ ಸರ್ಕಾರದಿಂದ ಅಧಿಕೃತ ಕಾರಣ ತಿಳಿದುಬಂದಿಲ್ಲ.