ದಿಗಂತ ವರದಿ ವಿಜಯಪುರ:
ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಹಮ್ಮಿಕೊಂಡ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಿದರು.
ಶಾಸಕ ಸಿ.ಎಸ್. (ಅಪ್ಪಾಜಿ) ನಾಡಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಜವಳಿ, ಕೃಷಿಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಪ್ರಕಾಶ ರಾಥೋಡ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಸುನೀಲಗೌಡ ಪಾಟೀಲ, ಪೊ.ಎಚ್.ಪೂಜಾರ, ವಿಠ್ಠಲ ಕಟಕಧೋಂಡ, ಅಶೋಕ ಮನಗೂಳಿ, ಭೀಮನಗೌಡ ಪಾಟೀಲ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾಂತಾ ನಾಯಕ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಿದ್ಯಾರಾಣಿ ತುಂಗಳ ಇತರರು ಇದ್ದರು.