ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಯುವ ಮತದಾರರನ್ನು ಸೆಳೆಯಲು ತಮ್ಮ ಐದನೇ ಗ್ಯಾರೆಂಟಿ ಯುವನಿಧಿ ಯೋಜನೆಗೆ ಇಂದು ಅದ್ಧೂರಿ ಚಾಲನೆ ನೀಡಲಿದೆ.
ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ಯುವನಿಧಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ.
ಇಂದಿನಿಂದ ಯುವನಿಧಿ ಯೋಜನೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಸಲುವಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ಎಂಬ ಶೀರ್ಷಿಕೆಯಡಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಇನ್ನು ಯುವ ಸಮುದಾಯದ ಸ್ಫೂರ್ತಿ ಕುವೆಂಪು ಪುಣ್ಯಭೂಮಿ ಶಿವಮೊಗ್ಗೆಯಲ್ಲಿ ಜನವರಿ ೧೨ರಂದು ಯೋಜನೆಗೆ ಅದ್ಧೂರಿ ಚಾಲನೆ ನೀಡಲು ಸರ್ಕಾರ ಸಿದ್ಧತೆ ನಡೆಸಿದೆ.