ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ವಿಧಾನಸೌಧದ ಮುಂಭಾಗ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ನಮ್ಮ ಸಂವಿಧಾನ ನಮ್ಮ ಹೆಮ್ಮೆ, ಸಂವಿಧಾನ ರಚಿಸಿದ ಅಂಬೇಡ್ಕರ್ ಅವರನ್ನು ನೆನಪಿಸಿಕೊಳ್ಳುವ ದಿನವಿದು. ಅವರ ಆಶಯಗಳನ್ನು ಎಲ್ಲರೂ ಅನುಸರಿಸೋಣ ಎಂದು ಸಿಎಂ ಹೇಳಿದ್ದಾರೆ.
ಅಂಬೇಡ್ಕರ್ ತೋರಿಸಿಕೊಟ್ಟ ಹಾದಿಯಲ್ಲಿ ನಡೆದಾಗ ಮಾತ್ರ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎನ್ನುವ ಸಮಾಜ ಕಟ್ಟಲು ಸಾಧ್ಯ ಎಂದಿದ್ದಾರೆ.