ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅನ್ನಭಾಗ್ಯ ಯೋಜನೆಗೆ ಚಾಲನೆ ಸಿಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯನ್ನು ಮೈಸೂರಿನಲ್ಲಿ ಚಾಲನೆ ಮಾಡುವುದಾಗಿ ಮುಖ್ಯಮಂತ್ರಿ ತಿಳಿಸಿದರು.
ಕೃತಜ್ಞತಾ ಸಮಾವೇಶಕ್ಕೆ ಬಂದ ಸಿದ್ದರಾಮಯ್ಯಗೆ ಸುತ್ತೂರು ಹೆಲಿಪ್ಯಾಡ್ನಲ್ಲಿ ಭರ್ಜರಿ ಸ್ವಾಗತ ಕೋರಲಾಯಿತು. ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡುತ್ತೇವೆ. ನಾಳೆ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದು, ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿದೆ ಎಂದರು.
ವರುಣಾವನ್ನು ತಾಲ್ಲೂಕು ಕೇಂದ್ರ ಮಾಡಬೇಕೆಂಬ ಆಗ್ರಹ ಕುರಿತು ಪ್ರತಿಕ್ರಿಯಿಸಿದ ಸಿಎಂ, ವರುಣಾ ಜನ ಕೇಳಿದ್ರೆ ಮಾಡುತ್ತೇವೆ. ಬಸವರಾಜ ಬೊಮ್ಮಾಯಿ ಹೇಳಿದ್ರೆ ಮಾಡೋದಿಲ್ಲ ಎಂದು ಉತ್ತರಿಸಿದರು.