ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೀದರ್-ಬೆಂಗಳೂರು ವಿಮಾನ ಹಾರಾಟಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಪ್ರಯಾಣಿಕರಿಗೆ ಬೋರ್ಡಿಂಗ್ ಪಾಸ್ ನೀಡಿ ಸಿಎಂ ಸಿದ್ದರಾಮಯ್ಯ ಇಂದು ವಿಮಾನ ಹಾರಾಟಕ್ಕೆ ಚಾಲನೆ ನೀಡಿದರು.
ಒಂದುವರೆ ವರ್ಷದಿಂದ ಬೀದರ್ ವಿಮಾನ ಹಾರಾಟ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ರಾಜ್ಯ ಸರ್ಕಾರದಿಂದ ರಿಯಾಯ್ತಿ ಕೊಡುವುದಾಗಿ ಒಪ್ಪಂದ ಆದ ಬಳಿಕ ಇಂದಿನಿಂದ ಬೀದರ್ ನಿಂದ ವಿಮಾನ ಹಾರಾಟ ಆರಂಭವಾಗಿದೆ.