Monday, October 2, 2023

Latest Posts

ಜೂ. 11ರಂದು ಶಕ್ತಿ ಯೋಜನೆಗೆ ಚಾಲನೆ: ಬಸ್ ಕಂಡಕ್ಟರ್ ಆಗಲಿದ್ದಾರೆ ಸಿಎಂ ಸಿದ್ದು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಂಗ್ರೆಸ್​ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯ ಚಾಲನೆಗೆ ಕ್ಷಣಗಣನೆ ಶುರುವಾಗಿದೆ. ಇದೇ ಭಾನುವಾರ (ಜೂ.11) ಮಹಿಳೆಯರ ಉಚಿತ ಬಸ್​ ಪ್ರಯಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಚುನಾವಣೆಗೂ ಮುನ್ನ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ಉಚಿತ ಗ್ಯಾರಂಟಿ ಯೋಜನೆಗಳನ್ನು ವಿಭಿನ್ನವಾಗಿ ಜಾರಿಗೆ ತರಲು ಸರ್ಕಾರ ಮುಂದಾಗಿದ್ದು, ಜೂ. 11ರಂದು ಮೊದಲ ಯೋಜನೆಗೆ ವಿಧಾನಸೌಧ ಮುಂಭಾಗದಲ್ಲಿ ಅಧಿಕೃತವಾಗಿ ಚಾಲನೆ ದೊರೆಯಲಿದೆ. ಅಂದು ಸಿಎಂ ಸಿದ್ದರಾಮಯ್ಯ ಅವರು ಕೆಲ ಕಾಲ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ​

ವಿಧಾನಸೌಧಕ್ಕೆ ತೆರಳುವ ರೂಟ್ ನಂಬರ್ 43ರ ಬಸ್ಸಿನಲ್ಲಿ ಕೆಲಕಾಲ ಕಂಡಕ್ಟರ್ ಆಗಲಿರುವ ಸಿಎಂ ಸಿದ್ದರಾಮಯ್ಯ, ಖುದ್ದು ಮಹಿಳೆಯರಿಗೆ ಟಿಕೆಟ್ ನೀಡಲಿದ್ದಾರೆ. ಈ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!