ಹೊಸದಿಗಂತ ವರದಿ ಯಾದಗಿರಿ:
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ 440.63 ಕೋಟಿ ರೂ.ವೆಚ್ಛದಲ್ಲಿ ಆರೋಗ್ಯ ಆವಿಷ್ಕಾರ ಯೋಜನೆಯಡಿ ಕಕ ಭಾಗದ ಆರೋಗ್ಯಇಲಾಖೆ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು.
ಕಲ್ಯಾಣ ಕರ್ನಾಟಕದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಬಹುದೊಡ್ಡ ಆಶಿರ್ವಾದ ಮಾಡಿದ್ದಾರೆ. ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಕಕ ಭಾಗದಿಂದ ಅತೀಹೆಚ್ಚಿನ ಸಂಖ್ಯೆಯಲ್ಲಿ ಶಾಸಕ ಮತ್ತು ಸಂಸದರನ್ನು ಆರಿಸಿ ಕಳಿಸಿದ್ದಾರೆ. ಈ ನಿಮ್ಮ ಋಣವನ್ನು ನಾವು ಯಾವತ್ತೂ ಮರೆಯುವುದಿಲ್ಲ ಎಂದರು.
ಕಲ್ಯಾಣ ಪಥ ಇಂದು ಅಭಿವೃದ್ಧಿ ರಥವಾಗಿ ಸಾಗುತ್ತಿದೆ. ಈ ಭಾಗದಲ್ಲಿ ಎಲ್ಲ ರಂಗದಲ್ಲಿ ಅಭಿವೃದ್ಧಿಯ ವೇಗ ಹೆಚ್ಚಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಕೆಕೆಆರ್ ಡಿಬಿ ವತಿಯಿಂದ ಆರೋಗ್ಯ ಕ್ಷೇತ್ರಕ್ಕೆ ಎರಡನೇ ಸ್ಥಾನ ರೂಪಿಸಿ, ಅದನ್ನು ಸಾಕಾರ ಮಾಡುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ ಎಂದರು.