ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಸಾಂಪ್ರದಾಯಕ ಮೈಸೂರು ಪೇಟ ತೊಡಿಸಿ, ಗಂಧದ ಹಾರ ಹಾಕಿ, ಅಂಬಾರಿಯ ಕೆತ್ತನೆ ನೀಡಿ ಗೌರವಿಸಿದ್ದಾರೆ.
ಸಂಸತ್ ಭವನಕ್ಕೆ ಸಿಎಂ ಭೇಟಿ ವೇಳೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆ. ಈ ಬಾರಿ ಸಿಎಂ ಆದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿಯನ್ನು ಸಿಎಂ ಸಿದ್ದು ಭೇಟಿ ಮಾಡಿದ್ದಾರೆ.
ರಾಜ್ಯಕ್ಕೆ ಬರಬೇಕಾದ, ಬಾಕಿ ಉಳಿದ ಅನುದಾನಗಳ ಬಿಡುಗಡೆ ಬಗ್ಗೆ ಪ್ರಧಾನಿ ಮೋದಿ ಅವರ ಜತೆ ಮಾತನಾಡಿದ್ದಾರೆ. ಇನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ.