Sunday, November 16, 2025

ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಸಂಪುಟ ಪುನಾರಚನೆಗೆ ಸಿಗುತ್ತಾ ಸಮ್ಮತಿ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಎಂ ಸಿದ್ದರಾಮಯ್ಯ ಇಂದು ದೆಹಲಿಯಲ್ಲಿ ಸೋನಿಯಾಗಾಂಧಿ, ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ರಾಜ್ಯ ಕ್ಯಾಬಿನೆಟ್ ಪುನರ್ ರಚನೆಗೆ ಅನುಮತಿ ನೀಡಬೇಕೆಂದು ಮನವಿ ಮಾಡಿದ್ದಾರೆ.

ಜನಪಥ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ರಾಹುಲ್ ಗಾಂಧಿ ಭೇಟಿಯಾಗಿ ಸಿಎಂ ಹಲವು ವಿಚಾರಗಳನ್ನು ಚರ್ಚಿಸಿದ್ದಾರೆ ಎನ್ನಲಾಗಿದೆ.

ರಾಹುಲ್ ಗಾಂಧಿ ಜೊತೆಗೆ ರಾಜ್ಯದ ಸಚಿವ ಸಂಪುಟದ ಪುನರ್ ರಚನೆಯ ಬಗ್ಗೆ ವಿಸ್ತೃತ ಚರ್ಚೆ ನಡೆಸುತ್ತಿದ್ದಾರೆ. ಸಚಿವ ಸಂಪುಟ ಪುನರ್ ರಚನೆಗೆ ಒಪ್ಪಿಗೆ ನೀಡಬೇಕೆಂದು ಹೈಕಮ್ಯಾಂಡ್ ನಾಯಕರಾದ ಸೋನಿಯಾಗಾಂಧಿ, ರಾಹುಲ್ ಗಾಂಧಿಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಸಂಪುಟ ಪುನಾರಚನೆ ಪ್ರಸ್ತಾಪವನ್ನು ಸಿಎಂ ಇಟ್ಟಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ಅವರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎನ್ನಲಾಗಿದೆ. ಡಿಸೆಂಬರ್‌ಗೂ ಮುನ್ನ ಸಂಪುಟ ಪುನಾರಚನೆಗೆ ಸಿಎಂ ಕ್ಲೈಮ್ ಮಾಡಿದ್ದಾರೆಂದು ತಿಳಿದುಬಂದಿದೆ.

ಬಿಹಾರದ ಚುನಾವಣೆ ಸೋಲಿನ ಬಗ್ಗೆ ರಾಹುಲ್ ಗಾಂಧಿ ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಹಾಗೂ ತೆಲಂಗಾಣದ ಸಿಎಂ ಜತೆ ಚರ್ಚಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸ ಮಾಡಿ ಸಂದೇಶ ನೀಡಿದ್ದಾರೆ ಎನ್ನಲಾಗಿದೆ.

error: Content is protected !!