ಕೇಂದ್ರ ಸಚಿವ ನಿತಿನ್‌ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಹೆದ್ದಾರಿ ಯೋಜನೆಗಳ ಕುರಿತು ಚರ್ಚೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಭೇಟಿಯಾಗಿ ಕರ್ನಾಟಕದ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಈ ವೇಳೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಬೆಳಗಾವಿ – ಹುನಗುಂದ- ರಾಯಚೂರು ಹೆದ್ದಾರಿ, ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇ, ಸೂರತ್‌ ಚೆನ್ನೈ ಎಕ್ಸ್‌ಪ್ರೆಸ್‌ ವೇ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ, ಗ್ರೀನ್‌ಫೀಲ್ಡ್‌ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಿದ್ದಾರೆ.

ರಾಜ್ಯ ಸರ್ಕಾರದ ಪ್ರಸ್ತಾವನೆ

  • ದಿನಕ್ಕೆ 10,000 ಪಿಸಿಯು ವಾಹನ ದಟ್ಟಣೆ ಹೊಂದಿರುವ ರಾಜ್ಯ ಹೆದ್ದಾರಿಗಳನ್ನು ಉನ್ನತೀಕರಿಸಲು ಮನವಿ
  • ಶಿರಾಡಿ ಘಾಟ್‌ನಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಟನೆಲ್‌ ನಿರ್ಮಾಣದ ಮೂಲಕ ಮಂಗಳೂರು ಬಂದರು ಸಂಪರ್ಕ ಇನ್ನಷ್ಟು ಸುಗಮಗೊಳಿಸುವುದು.
  • ಮೈಸೂರು ನಗರದ ಮಣಿಪಾಲ್‌ ಆಸ್ಪತ್ರೆ ಜಂಕ್ಷನ್‌ (ಕೊಲಂಬಿಯ ಏಷ್ಯಾ ಆಸ್ಪತ್ರೆ) ನಲ್ಲಿ ಫ್ಲೈಓವರ್‌ ನಿರ್ಮಾಣಕ್ಕೆ ಅನುಮೋದನೆ.
  • ಮೈಸೂರು ರಿಂಗ್‌ ರಸ್ತೆಯಲ್ಲಿ NH-275K ನಲ್ಲಿ 9 ಗ್ರೇಡ್‌ ಸೆಪರೇಟರುಗಳ ನಿರ್ಮಾಣಕ್ಕೆ ಅನುಮೋದನೆ
  • ಬೆಳಗಾವಿ ನಗರದಲ್ಲಿ ಹಳೆ NH4 ನಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಅನುಮೋದನೆ
  • ಬೆಳಗಾವಿ ಜಿಲ್ಲೆಯ ಗೋಕಾಕ್‌ ಜಲಪಾತದಲ್ಲಿ ಕೇಬಲ್‌ ಕಾರ್‌ ಸೌಲಭ್ಯ ಕಲ್ಪಿಸುವ ಯೋಜನೆ
  • ಕಿತ್ತೂರು ಪಟ್ಟಣದಿಂದ ಬೈಲಹೊಂಗಲವನ್ನು ಸಂಪರ್ಕಿಸುವ ರಸ್ತೆಯ ಸುಧಾರಣೆ.
  • ಕಲಬುರಗಿ ಮತ್ತು ರಾಯಚೂರಿನಲ್ಲಿ ಬೈಪಾಸ್‌ ನಿರ್ಮಾಣ
  • NH-373 ರ ಬೇಲೂರು ಚಿಕ್ಕಮಗಳೂರು ವಿಭಾಗದಲ್ಲಿ ಚತುಷ್ಪಥ ನಿರ್ಮಾಣ.
  • ಚಳ್ಳಕೆರೆ ಪಟ್ಟಣ ವ್ಯಾಪ್ತಿಯಲ್ಲಿ NH-150A ಯ ಒಂದು ಬಾರಿ ಸುಧಾರಣೆ.
  • ರಾಷ್ಟ್ರೀಯ ಹೆದ್ದಾರಿ NH-766 ರ 106 ಕಿ.ಮೀ. ರಸ್ತೆಯನ್ನು ಚತುಷ್ಪಥ, ಆರು ಪಥದ ಹೆದ್ದಾರಿಯಾಗಿ ಅಭಿವೃದ್ಧಿ ಪಡಿಸುವುದು.
  • ಈಗಾಗಲೇ ತಾತ್ವಿಕ ಅನುಮೋದನೆ ದೊರೆತಿರುವ ಕೇರಳದ ಕಲ್ಪೆಟ್ಟದಿಂದ ಮಾನಂದವಾಡಿ, ಎಚ್.ಡಿ.ಕೋಟೆ, ಜಯಪುರ ಮೂಲಕ ಮೈಸೂರನ್ನು ಸಂಪರ್ಕಿಸುವ 90 ಕಿ.ಮೀ. ಹೆದ್ದಾರಿ, ಮೈಸೂರಿನಿಂದ ಬನ್ನೂರು ಮೂಲಕ ಮಳವಳ್ಳಿಯನ್ನು ಸಂಪರ್ಕಿಸುವ 45 ಕಿ.ಮೀ. ಹೆದ್ದಾರಿ ಹಾಗೂ ಬೆಳಗಾವಿ ಜಿಲ್ಲೆಯ ಸಂಕೇಶ್ವರದಿಂದ ಗೋಕಾಕ- ಯರಗಟ್ಟಿ-ಮನ್ವಳ್ಳಿ ಮೂಲಕ ನರಗುಂದ ವನ್ನು ಸಂಪರ್ಕಿಸುವ 127 ಕಿ.ಮೀ. ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸಲು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!