ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಿಲ್ಲಾವಾರು ಶಾಸಕರು ಹಾಗೂ ಉಸ್ತುವಾರಿ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಇಂದು ವಿಧಾನಸೌಧದಲ್ಲಿ ಎರಡನೇ ದಿನದ ಸಭೆ ನಡೆಸುತ್ತಿದ್ದಾರೆ.
ವಿಧಾನಸೌಧದ ಮೂರನೆ ಮಹಡಿಯ ಸಿಎಂ ಕಚೇರಿಯಲ್ಲಿ ಸಿದ್ದರಾಮಯ್ಯ ಬೆಳಗ್ಗೆ 11 ಗಂಟೆಯಿಂದ ಸಂಜೆ 7 ಗಂಟೆವರೆಗೆ ಸರಣಿ ಸಭೆ ನಡೆಸಲಿದ್ದಾರೆ. ಇಂದು ಒಟ್ಟು 10 ಜಿಲ್ಲೆಯ ಕಾಂಗ್ರೆಸ್‌ನ ಶಾಸಕರು ಹಾಗೂ ಸಚಿವರ ಜೊತೆ ಸಿಎಂ ಸಭೆ ನಡೆಸಲಿದ್ದಾರೆ. ಬೆ
ಳಗ್ಗೆ 11 ರಿಂದ ಮಧ್ಯಾಹ್ನ 02:30ರವರೆಗೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ,ವಿಜಯನಗರ, ಬಳ್ಳಾರಿ ಜಿಲ್ಲೆಯ ಶಾಸಕರ ಜೊತೆ ಸಭೆ ನಡೆಯಲಿದೆ.
ಸಂಜೆ 4 ರಿಂದ ರಾತ್ರಿ 7 ಗಂಟೆವರೆಗೆ ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ಶಾಸಕರು ಹಾಗೂ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.