ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರ ಸಚಿವ ಸಂಪುಟ ರಚನೆ ಕಸರತ್ತಿನಲ್ಲಿ ತೊಡಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ.
ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಸೋನಿಯಾರನ್ನು ಭೇಟಿಯಾದ ಸಿದ್ದರಾಮಯ್ಯ ಅವರು ಕೆಲಕಾಲ ಚರ್ಚೆ ನಡೆಸಿದರು. ಬಳಿಕ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಹಾಗೂ ರಾಬರ್ಟ್ ವಾದ್ರಾರನ್ನು ಭೇಟಿಯಾದರು.
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಕಳೆದೆರಡು ದಿನಗಳಿಂದ ಹೊಸದಿಲ್ಲಿಯಲ್ಲಿ ಸರಣಿ ಸಭೆ ನಡೆಸಿ ನೂತನ ಸಚಿವರ ಪಟ್ಟಿ ಅಂತಿಮಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ವರದಿಯ ಪ್ರಕಾರ 24 ಮಂದಿ ಶಾಸಕರ ಪಟ್ಟಿ ಬಹುತೇಕ ಅಂತಿಮವಾಗಿದ್ದು, ಶನಿವಾರ ಸಂಪುಟ ವಿಸ್ತರಣೆ ಆಗಲಿದೆ ಎಂದು ಮೂಲಗಳು ತಿಳಿಸಿವೆ.
https://twitter.com/siddaramaiah/status/1661975715577987082?s=20