ದಿಗಂತ ವರದಿ ವಿಜಯಪುರ:
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಏಕ ವಚನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಷರತ್ ಕ್ಷಮೆ ಕೇಳಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದ್ದಾರೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಟ್ವಿಟ್ ಮಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಾಯ್ತಪ್ಪಿನಿಂದ, ಕಣ್ತಪ್ಪಿನಿಂದ, ಆ ಘಳಿಗೆಯಲ್ಲಿ ಹೀಗಾಯ್ತು, ನಾನು ಹಳ್ಳಿಯವ, ಹಾಗೆ ಮಾತನಾಡಿದೆ ಎಂದು ಸಬೂಬು ಹೇಳಿ ಮುಚ್ಚಿ ಹಾಕುವ ಪ್ರಯತ್ನ ಮಾಡಬಾರದು ಎಂದು ಕಿಡಿಕಾರಿದ್ದಾರೆ.