ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಇಂದು ಮುಸ್ಲಿಂ ಬಾಂಧವರು ಬಕ್ರೀದ್ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದಾರೆ.
ಸಿಎಂ ಅವರನ್ನು ಗೌರವಿಸಲು ಯಾವುದೇ ಹಾರ ತುರಾಯಿಯನ್ನು ತರದೇ ಮುಸ್ಲಿಂ ವಸ್ತ್ರ ಹಾಗೂ ಟೋಪಿ ತೊಡಿಸುವ ಮೂಲಕ ಸಿದ್ದರಾಮಯ್ಯ ಅವರನ್ನು ಗೌರವಿಸಲಾಗಿದೆ.