ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ದೆಹಲಿಯಲ್ಲಿ ಎಐಸಿಸಿ ಕಾರ್ಯಕಾರಿ ಸಭೆ ನಡೆಯಲಿದ್ದು, ಸಭೆಯಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ದೆಹಲಿಗೆ ತೆರಳಿದ್ದಾರೆ. ಆದಕಾರಣ ಇಂದು ನಿಗದಿಯಾಗಿದ್ದ ಜನತಾ ದರ್ಶನ ಕಾರ್ಯಕ್ರಮ ಮುಂದೂಡಲಾಗಿದೆ.
ದೂರದ ಊರುಗಳಿಂದ ಸಿಎಂ ಭೇಟಿ ಮಾಡಲು ಬರುವವರು ಈ ಸುದ್ದಿಯನ್ನು ದಯವಿಟ್ಟು ಒಮ್ಮೆ ಗಮನಿಸುವುದು ಒಳಿತು.
ಜನತಾ ದರ್ಶನದ ಮುಂದಿನ ದಿನಾಂಕ ನಂತರ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.