ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರುಶನವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಪಡೆದರು.
ಬೆಂಗಳೂರಿನ ಸದಾಶಿವನಗರದಲ್ಲಿರುವಂತ ಅವರ ನಿವಾಸಕ್ಕೆ ತೆರಳಿದಂತ ಸಿಎಂ ಸಿದ್ಧರಾಮಯ್ಯ ಅವರು, ಎಸ್ ಎಂ ಕೃಷ್ಣ ಪಾರ್ಥೀವ ಶರೀರಕ್ಕೆ ಹೂಗುಚ್ಚ ಅರ್ಪಿಸಿ, ಕೈಮುಗಿದು ಅಂತಿಮ ದರುಶನವನ್ನು ಪಡೆದರು.
ಈ ವೇಳೆ ಮಾತನಾಡಿದ ಅವರು, ಎಸ್ ಎಂ ಕೃಷ್ಣ ಅವರು ಸಿಎಂ ಆಗಿದ್ದಾಗ ಅನೇಕ ಸವಾಲುಗಳನ್ನು ಎದುರಿಸಿದ್ದರು. ಒಬ್ಬ ದೂರದೃಷ್ಠಿ ಇದ್ದಂತ ಮುತ್ಸದ್ದಿ ರಾಜಕಾರಣಿಯಾಗಿದ್ದರು. ದೀರ್ಘ ಕಾಲ ರಾಜ್ಯ, ರಾಷ್ಟ್ರ ರಾಜಕಾರಣದಲ್ಲಿದ್ದರು. 6 ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿ ಇದ್ದರು ಎಂದರು.
ಎಸ್ ಎಂ ಕೃಷ್ಣ ಅವರು ಸಮರ್ಥ ಆಡಳಿತಗಾರರಾಗಿದ್ದರು. ಬೆಂಗಳೂರು ಸಿಂಗಾಪುರ ಮಾಡಬೇಕೆಂದು ಕನಸು ಕಂಡಿದ್ರು. ಐಟಿ ಕ್ಷೇತ್ರ ಬೆಳವಣಿಗೆಗೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಇಂದು ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರೋದಕ್ಕೆ ಎಸ್ ಎಂ ಕೃಷ್ಣ ಅವರ ಕೊಡುಗೆ ಕಾರಣ. ಬೆಂಗಳೂರು ಐಟಿ-ಬಿಟಿ ಸಿಟಿಯಾಗಲು ಎಸ್ ಎಂ ಕೃಷ್ಣ ಅಪಾರ ಕೊಡುಗೆ ನೀಡಿದ್ದಾರೆ ಎಂದು ಕೊಂಡಾಡಿದರು.