ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪಟ್ಟು: ವಿಧಾನಸೌಧಕ್ಕೆ ಬೀಗ ಹಾಕಲು ಯತ್ನಿಸಿದ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಕೂಗು ಜೋರಾಗಿದೆ. ಸಿಎಂ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಕಾರ್ಯಕರ್ತರು ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿತ್ತು.

ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ಪ್ಲೆಕಾರ್ಡ್‌ಗಳನ್ನು ಪ್ರದರ್ಶಿಸಿ ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದರು.ಈ ವೇಳೆ ವಿಧಾನಸೌಧಕ್ಕೆ ಬೀಗ ಹಾಕಲು ಮುಂದಾದರು. ಆದರೆ ವಿಪಕ್ಷಗಳ ನಾಯಕರ ಯತ್ನವನ್ನು ಪೊಲೀಸರು ವಿಫಲಗೊಳಿಸಿದರು. ಈ ವೇಳೆ ಪ್ರತಿಭಟನಾ ಸ್ಥಳದಲ್ಲಿ ಹೈಡ್ರಾಮಾ ಸೃಷ್ಟಿಸಿದರು.

ಪೊಲೀಸರ ಕಣ್ಣು ತಪ್ಪಿಸಿ ಬೀಗ ಹಾಕಲು ಅರವಿಂದ್ ಬೆಲ್ಲದ್ ಯತ್ನಿಸಿದರು. ಪೊಲೀಸರ ಕಣ್ತಪ್ಪಿಸಿ ದ್ವಾರಕ್ಕೆ ಬೀಗ ಹಾಕಲು ಕಸರತ್ತು ನಡೆಸಿದರು. ವಿಧಾನಸೌಧದ ಕೆಂಗಲ್ ಗೇಟ್ ಬಳಿ ಮೆಗಾ ಡ್ರಾಮಾವೇ ನಡೆಯಿತು. ಆಗ ಪೊಲೀಸರೇ ಬಾಗಿಲು ಮುಚ್ಚಿ ಬೆಲ್ಲದ್ ಅವರನ್ನು ತಡೆದರು. ಕೊನೆಗೆ ಪ್ರತಿಭಟನಾಕಾರರನ್ನು ಬಸ್‌ನಲ್ಲಿ ತುಂಬಿಕೊಂಡು ಪೊಲೀಸರು ಹೊರಟರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!