‘ಶಕ್ತಿ’ಹೆಸರಿನ ಹಿಂದಿನ ಸೀಕ್ರೆಟ್ ರಿವೀಲ್ ಮಾಡಿದ ಸಿಎಂ ಸಿದ್ದರಾಮಯ್ಯ!

ಹೊಸದಿಂಗತ ಡಿಜಿಟಲ್‌ ಡೆಸ್ಕ್:‌

ರಾಜ್ಯ ಕಾಂಗ್ರೆಸ್ ಸರ್ಕಾರ (Congress Government) ದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆ (Shakti Scheme) ಗೆ ಇಂದು ಚಾಲನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇದೀಗ ಈ ಹೆಸರಿನ ಹಿಂದಿನ ಸೀಕ್ರೆಟ್ ರಿವೀಲ್ ಮಾಡಿದ್ದಾರೆ.

ಉದ್ಘಾಟನೆ ಮಾಡಿದ ಬಳಿಕ ತಮ್ಮ ಭಾಷಣದ ವೇಳೆ ‘ಶಕ್ತಿ’ ಎಂದು ಹೆಸರು ಇಟ್ಟಿದ್ದು ಯಾಕೆ ಎಂಬುದನ್ನು ಬಹಿರಂಗಪಡಿಸಿದ್ದಾರೆ.
ಹೆಣ್ಣುಮಕ್ಕಳಿಗೆ ಶಕ್ತಿ ತುಂಬೋಕೆ ಅಂತ ಈ ಹೆಸರು ಇಟ್ಟೆವು. ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಅಸಮತೋಲನ ಕಡಿಮೆ ಮಾಡಬಹುದು. 5 ಗ್ಯಾರಂಟಿ ಪೈಕಿ 4 ಗ್ಯಾರಂಟಿ ಮಹಿಳೆಯರಿಗೆ ಸೀಮಿತ, ಅವರಿಗೆ ಸಂಬಂಧಿಸಿದೆ. ಕೆಲವರು ಇದಕ್ಕೆ ಗೇಲಿ ಮಾಡಿ, ಕುಹಕ ಮಾತು ಆಡ್ತಾರೆ. ಇದಕ್ಕೆ ನಾವು ತಲೆ ಕೆಡಿಸಿಕೊಳ್ಳಲ್ಲ. ಗೇಲಿ ಮಾಡೋರಿಗೆ, ಕುಹಕ ಮಾಡೋರಿಗೆ ಸೊಪ್ಪು ಹಾಕಲ್ಲ ಎಂದು ಹೇಳಿದರು.

ಸಮಾಜ ಅಭಿವೃದ್ಧಿ ಪಥದಲ್ಲಿ ಸಾಗಬೇಕಾದ್ರೆ ಪುರುಷರಷ್ಟೆ ಮಹಿಳೆಯರಿಗೆ ಅವಕಾಶ ಸಿಗಬೇಕು. ಆಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ. ಇಲ್ಲದೆ ಹೋದ್ರೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಯಾವುದೇ ಅಭಿವೃದ್ಧಿ ಹೊಂದಿದ ದೇಶದಲ್ಲಿ ಮಹಿಳೆಯರೇ ಹೆಚ್ಚು ಅವಕಾಶ ಪಡೆಯುತ್ತಿದ್ದಾರೆ. ಅಮೆರಿಕಾ, ಚೀನ, ಆಸ್ಟ್ರೇಲಿಯ, ಇಂಡೋನೇಷ್ಯಾ, ಬಾಂಗ್ಲಾದೇಶದಲ್ಲಿ ಹೆಚ್ಚು ಮಹಿಳೆಯರು ಪಾಲ್ಗೊಳ್ಳುತ್ತಿದ್ದಾರೆ ಎಂದರು.

ಭಾರತದಲ್ಲಿ 24% ಮಾತ್ರ ಸಾರ್ವಜನಿಕ ಕ್ಷೇತ್ರದಲ್ಲಿ ಇದ್ದಾರೆ. 2014 ರಲ್ಲಿ 30% ರಿಂದ 24% ಗೆ ಇಳಿದಿದೆ. ಇದನ್ನ ಮಹಿಳೆಯರು ಅರ್ಥ ಮಾಡಿಕೊಳ್ಳಬೇಕು. ಮಹಿಳೆಯ ಬಗ್ಗೆ ಮೊಸಳೆ ಕಣ್ಣೀರು ಹಾಕೋರ ಕಾಲದಲ್ಲಿ 30% ನಿಂದ 24% ಮಹಿಳೆ ಪಾಲ್ಗೊಳ್ಳುವಿಕೆ ಆಗಿದೆ. ಮನುವಾದಿಗಳು ಬಯಸೋದೆ ಅದು. ಹೆಣ್ಣು ಮಕ್ಕಳು ಹೊರಗೆ ಬರಬಾರದು ಅನ್ನೋದು ಮನುವಾದಿಗಳ ಆಸೆ. ಯಾವ ದೇಶದಲ್ಲಿ ಹೆಚ್ಚು ಮಹಿಳೆಯರು ಸಾರ್ವಜನಿಕ ಕ್ಷೇತ್ರದಲ್ಲಿ ಇದ್ದರೆ ದೇಶ ಅಭಿವೃದ್ಧಿ ಆಗುತ್ತೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!