ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪೆನ್‌ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಸಚಿವರುಗಳು ಕೂಡ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಪೆನ್‌ಡ್ರೈವ್ ಪ್ರಕರಣದಲ್ಲಿ ಅನಗತ್ಯವಾಗಿ ಪ್ರತಿಕ್ರಿಯೆ ಕೊಡಬೇಡಿ. ಮಾತು ಹೆಚ್ಚಾದರೆ ಇಡೀ ಪ್ರಕರಣದ ದಿಕ್ಕೇ ತಪ್ಪಿ ಹೋಗಬಹುದು. ಹೀಗಾಗಿ ಪ್ರತಿಕ್ರಿಯೆ ಕೊಡುವಾಗ ಎಚ್ಚರಿಕೆ ವಹಿಸಿ ಎಂದು ಮುಖಮಂತ್ರಿ ಸಿದ್ದರಾಮಯ್ಯ ಅವರು ಸಚಿವರಿಗೆ ಸಲಹೆ ನೀಡಿದ್ದಾರೆ.