Sunday, December 3, 2023

Latest Posts

ವ್ಯವಸಾಯಕ್ಕೆಂದು ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದನ್ನು ನಿಲ್ಲಿಸಿ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವ್ಯವಸಾಯದ ಹೆಸರಿನಲ್ಲಿ ಸಾಲ ಮಾಡಿ ಅದ್ಧೂರಿಯಾಗಿ ಮದುವೆ ಮಾಡುವುದನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆ ಕೊಟ್ಟಿದ್ದಾರೆ.

ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇವಸ್ಥಾನದ ರಂಗಮಂದಿರದ ಆವರಣದಲ್ಲಿ ಆಯೋಜಿಸಲಾಗಿದ್ದ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ದೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ. ಜೀವನ ಪರ್ಯಂತ ಸಾಲ ತೀರಿಸುತ್ತಾ ಕೂರಬೇಕಾಗುತ್ತದೆ. ಆದ್ದರಿಂದ ಸರಳ ಮತ್ತು ಸಾಮೂಹಿಕ ವಿವಾಹಗಳು ಜಾಸ್ತಿಯಾಗಬೇಕು ಎಂದರು.

ಅಲದೇ ವ್ಯವಸಾಯದ ಹೆಸರಲ್ಲಿ ಸಾಲ ಮಾಡಿ ಅದ್ದೂರಿಯಾಗಿ ಮದುವೆ ಮಾಡುವುದು ನಿಜಕ್ಕೂ ಅನಾರೋಗ್ಯಕರ ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!