ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯ ಅಪರಾಧಿ ಸ್ಥಾನದಲ್ಲಿದ್ದಾರೆ ಅವರು ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದರು.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯಪಾಲರ ಸೂಚನೆಗೆ ಸಿಎಂ ಹೆದರಿದ್ದಾರೆ. ಇಂದಿನ ಸರ್ಕಾರದ ಸಭೆಯಲ್ಲಿ ರಾಜ್ಯಪಾಲರ ವಿರುದ್ಧ ನಿರ್ಣಯ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರ ಕಾನೂನು ವಿರುದ್ಧ, ಸಂವಿಧಾನದ ವಿರುದ್ಧ ಕೆಲಸ ಮಾಡುತ್ತಿದೆ. ನೀವು ಯಾವುದೇ ತಪ್ಪು ಮಾಡಿಲ್ಲ ಎಂದಾದರೆ ಏಕೆ ಭಯಪಡುತ್ತೀರಿ ಎಂದು ಸಚಿವರು ಪ್ರಶ್ನಿಸಿದರು.
ನೀವು ರಾಜೀನಾಮೆ ನೀಡಿ ತನಿಖೆ ಎದುರಿಸಿ. ನಿರಪರಾಧಿ ಎಂದಾದರೆ ಮತ್ತೆ ಅಧಿಕಾರ ಹಿಡಿಯಿರಿ. ಆದರೆ ನೀವು ರಾಜ್ಯಪಾಲರ ಸಂದೇಶಕ್ಕೆ ಪ್ರತಿಕ್ರಿಯಿಸಬೇಕು. ಸಿದ್ದರಾಮಯ್ಯ ತಪ್ಪಿತಸ್ಥರಾಗಿದ್ದು, ರಾಜೀನಾಮೆ ನೀಡಬೇಕು. ಸಚಿವ ಸಂಪುಟದ ಇಂದಿನ ನಿರ್ಧಾರಕ್ಕೆ ಅತೃಪ್ತಿ ವ್ಯಕ್ತಪಡಿಸಿದ ಅವರು, ರಾಜ್ಯಪಾಲರ ವಿರುದ್ಧ ಷಡ್ಯಂತ್ರ ರೂಪಿಸಲಾಗುತ್ತಿದೆ ಎಂದರು.