ಕೇಂದ್ರ ಸರ್ಕಾರದ ಬಜೆಟ್ ವಿರುದ್ಧ ಸಿಎಂ ಸಿದ್ದರಾಮಯ್ಯ ಸರಣಿ ಪೋಸ್ಟ್‌ ವಾರ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಖಂಡಿಸಿ ದೆಹಲಿಯಲ್ಲಿ ಕರೆದಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುದೀರ್ಘ ಪೋಸ್ಟ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಿಂದ ಆಯ್ಕೆಯಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಎಲ್ಲಾ ರಾಜ್ಯ ಸಂಸದರ ಸಭೆಯಲ್ಲಿ ರಾಜ್ಯದ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅನುಮೋದನೆ ಪಡೆದಿದ್ದರೂ ಇಂದು ಮಂಡಿಸಿದ ಕೇಂದ್ರ ಸರ್ಕಾರದ ಬಜೆಟ್‌ನಿಂದ ಕರ್ನಾಟಕವನ್ನು ಸಂಪೂರ್ಣವಾಗಿ ಹೊರಗಿಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಜುಲೈ 27 ರಂದು ದೆಹಲಿಯಲ್ಲಿ ಕರೆದಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ಮತ್ತು ಕೇಂದ್ರ ಸರ್ಕಾರದ ಈ ಉದ್ದೇಶಪೂರ್ವಕ ನಿರ್ಲಕ್ಷ್ಯ ಮತ್ತು ತಾರತಮ್ಯ ನೀತಿಗಳನ್ನು ಖಂಡಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!