ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬರುವ ಆರ್ಥಿಕ ವರ್ಷದಲ್ಲಿ ₹1,000 ಕೋಟಿ ಸಾಲ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ. ಅವರು ರಾಜ್ಯದ ಜನಸಂಖ್ಯೆಗೆ ತಲಾ 45,000 ರೂ. ಸಾಲದ ಹೊರೆ ನೀಡುತ್ತಿದ್ದಾರೆ. ಇದಕ್ಕಾಗಿ ಅವರಿಗೆ ಸಾಲ ಭಾರ ಪ್ರಶಸ್ತಿ ನೀಡಬೇಕು ಎಂದು ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಎದುರು ಹಾಕಿಕೊಳ್ಳುತ್ತಿದ್ದಾರೆ. ಇದರಿಂದ ದೇಶದ ಜನತೆಗೆ ಅನ್ಯಾಯವಾಗುತ್ತಿದೆ. ಹೆಚ್ಚಿನ ಅನುದಾನ ಪಡೆಯಲು ಕೇಂದ್ರದ ಮನವೊಲಿಸಬೇಕು. ನಾನು ಸಚಿವನಾಗಿದ್ದಾಗ ಹೆಚ್ಚಿನ ಅನುದಾನ ತಂದಿದ್ದೆ ಎಂದು ಹೇಳಿದರು.