ಕೊಟ್ಟ ಮಾತಿನಂತೆ ನಡೆದುಕೊಂಡ ಸರ್ಕಾರ ನಮ್ಮದು: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನಮ್ಮ ಸರ್ಕಾರವು ಕೊಟ್ಟ ಮಾತಿನಂತೆ ನಡೆದುಕೊಂಡಿದೆ. ಚುನಾವಣಾ ಪೂರ್ವದಲ್ಲಿ ಘೋಷಿಸಲಾದ ಯೋಜನೆಗಳನ್ನು ನೂರು ದಿನಗಳಲ್ಲಿ ಜಾರಿಗೆ ತಂದಿದ್ದೇವೆ. ಇದರಿಂದ ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದ ಬಳಿಕ ಸಿದ್ದರಾಮಯ್ಯ ಅವರು ಮಹಿಳೆಯರನ್ನು ಉದ್ದೇಶಿಸಿ ಮಾತನಾಡಿದರು. ನೂರು ದಿನಗಳನ್ನು ಯಶಸ್ವಿಯಾಗಿ ಪೂರೈಸಿದ್ದೇವೆ. ಅಲ್ಲದೇ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಯಾವ ಸರ್ಕಾರ ಕೂಡ ಕೊಟ್ಟ ಮಾತನ್ನು ನೂರು ದಿನದಲ್ಲಿ ಈಡೇರಿಸಿಲ್ಲ ಎಂದರು.

ಚುನಾವಣೆಗು ಮುಂಚೆ ನೀಡಿದ ಭರವಸೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ಜಾರಿಗೆ ತಂದಿದ್ದೇವೆ. ಇದು ಜನಪರ ಸರಕಾರ, ಜನರ ಒಳಿತಿಗಾಗಿ ಬದ್ಧವಾದ ಸರ್ಕಾರ ಎಂದು ಹೇಳಿದರು.

ಈಗಾಗಲೇ ನಾವು ನಾಲ್ಕು ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ. ಯುವನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಜಾರಿಗೆ ತರುತ್ತೇವೆ ಎಂದರು.

ವಿಪಕ್ಷಗಳು ಹೇಳೋದೆಲ್ಲವೂ ಸುಳ್ಳು ಎನ್ನುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!