ನಟ ಸುದೀಪ್ ಪ್ರಚಾರಕ್ಕೆ ಬಾರದಂತೆ ತಡೆಹಿಡಿದರು ಸಿಎಂ ಸಿದ್ದರಾಮಯ್ಯ: ಪ್ರತಾಪ್ ಸಿಂಹ ಆರೋಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮೈಸೂರು -ಕೊಡಗು ಸಂಸದ ಪ್ರತಾಪ್ ಸಿಂಹ ನಿರಂತರ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ಇದೀಗ ಇಂದು ಸಿಎಂ ಸಿದ್ದರಾಮಯ್ಯನವರ ಮೇಲೆ ಆರೋಪ ಒಂದು ಮಾಡಿದ್ದಾರೆ.

ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಿಚ್ಚ ಸುದೀಪ್ (Sudeep) ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರ ಮಾಡಿದರು. ವಿವಿಧ ಕಡೆ ಬಹಿರಂಗ ಸಭೆ ಹಾಗೂ ರಾಲಿಗಳಲ್ಲೂ ಸುದೀಪ್ ಭಾಗಿಯಾದರು. ಆದ್ರೆ ವರುಣಾ ಕ್ಷೇತ್ರಕ್ಕೆ ಹೋಗಿರಲಿಲ್ಲ. ಇದಕ್ಕೆ ಕಾರಣ ಸಿದ್ದರಾಮಯ್ಯ ಎಂದು ಆರೋಪ ಮಾಡಿದ್ದಾರೆ.

ವರುಣಾ ಕ್ಷೇತ್ರದಲ್ಲಿ ( Varuna Constituency) ಸಿದ್ದರಾಮಯ್ಯನವರು ಗೆಲ್ಲುವುದಕ್ಕಾಗಿ ನಾನಾ ರೀತಿಯ ಹೊಂದಾಣಿಕೆಗಳನ್ನು ಮಾಡಿಕೊಂಡರು. ಸುದೀಪ್ ಅವರು ವರುಣಾ ಕ್ಷೇತ್ರದ ಪ್ರಚಾರಕ್ಕೆ ಬಾರದಂತೆ ತಡೆಹಿಡಿದರು ಎಂದು ಸಿಂಹ ಆರೋಪಿಸಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಸುದೀಪ್ ಪತ್ರಿಕಾಗೋಷ್ಠಿ ಮಾಡಿ, ತಾವು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ ಎಂದು ಹೇಳಿದ್ದರು. ಜಾತಿ ಲೆಕ್ಕಾಚಾರವನ್ನು ಗಣನೆಗೆ ತಗೆದುಕೊಂಡು ಸುದೀಪ್ ಅವರನ್ನು ಕೆಲ ಕ್ಷೇತ್ರಗಳಿಗೆ ಮಾತ್ರ ಪ್ರಚಾರಕ್ಕೆ ಕಳುಹಿಸಲಾಗಿತ್ತು.

ಆದ್ರೆವರುಣಾ ಕ್ಷೇತ್ರಕ್ಕೆ ಸುದೀಪ್ ಬರಲಿಲ್ಲ. ಸುದೀಪ್ ಬರುತ್ತಾರೆ ಎಂದು ಹೇಳಲಾಗಿತ್ತು. ಆದರೆ ಇದರ ಹಿಂದೆ ಸಿದ್ದರಾಮಯ್ಯನವರು ಇದ್ದರು ಎಂದು ಸಿಂಹ ಆರೋಪ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!