ತಾಯಿ ಚಾಂಮುಂಡೇಶ್ವರಿಗೆ ಚಿನ್ನದ ರಥ ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸುವ ಸಂಬಂಧ ಪರಿಶೀಲಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಅವರಿಗೆ ಆದೇಶಿಸಿದ್ದಾರೆ.

ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಹಿನ್ನೆಲೆ ಸಿಎಂ ಈ ಆದೇಶ ಮಾಡಿದ್ದಾರೆ. ನಾಡದೇವಿಗೆ ಚಿನ್ನದ ರಥ ನಿರ್ಮಿಸಬೇಕು ಎಂಬ ಭಕ್ತರ, ಬೇಡಿಕೆಯನ್ನು ಅರಿತು, ಸಂಕಲ್ಪ ಮಾಡಿಕೊಂಡು ಪ್ರಯತ್ನಿಸಲಾಗಿತ್ತು. ಸಿಎಂ ಆದೇಶದಿಂದ ಈಗ ಆ ಪ್ರಯತ್ನದಲ್ಲಿ ಮೊದಲ ಹೆಜ್ಜೆಯನ್ನು ಇಟ್ಟಂತಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!