ಸಿಎಂ ಸಿದ್ದರಾಮಯ್ಯ ನಾಳೆ ದೆಹಲಿಗೆ, ಕೇಂದ್ರ ಸಚಿವರ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ದೆಹಲಿಗೆ ತೆರಳಲಿದ್ದಾರೆ. ಯಾವುದೇ ಮಾತುಕತೆ ಕುರಿತ ಭೇಟಿ ಇದಾಗಿಲ್ಲದೆ, ಸೌಹಾರ್ದತೆಯ ಭೇಟಿಯಾಗಿರಲಿದೆ. ಗೃಹಸಚಿವ ಅಮಿತ್ ಶಾ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಿಎಂ ಭೇಟಿ ಮಾಡಲಿದ್ದಾರೆ.

ಪ್ರಧಾನಿ ಮೋದಿ ಅವರನ್ನೂ ಭೇಟಿ ಮಾಡುವ ಕಾರ್ಯಕ್ರಮವಿತ್ತು, ಆದರೆ ಪ್ರಧಾನಿ ಮೋದಿ ಇಂದಿನಿಂದ ನಾಲ್ಕು ದಿನ ಅಮೆರಿಕ ಪ್ರವಾಸದಲ್ಲಿದ್ದು, ಅವರನ್ನು ಭೇಟಿ ಮಾಡಲು ಸಾಧ್ಯವಾಗುವುದಿಲ್ಲ.

ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ರಾಜ್ಯದ ಕಾಮಗಾರಿ ಯೋಜನೆಗಳಿಗೆ ಸಹಕಾರ ನೀಡುವ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ಅನ್ನಭಾಗ್ಯ ವಿಷಯವಾಗಿ ಮತ್ತೇನಾದರೂ ಮನವಿ ಮಾಡಲು ಸಿಎಂ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರಾ ಎನ್ನುವ ಬಗ್ಗೆ ಮಾಹಿತಿ ಇಲ್ಲ.

ಜೊತೆಗೆ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರ ಸಭೆಯಲ್ಲಿ ಸಿದ್ದರಾಮಯ್ಯ ಭೇಟಿಯಾಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!