ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಹಾವೇರಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಬೆಳಗ್ಗೆ 11 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿರುವ ಸಿಎಂ, ಅಲ್ಲಿಂದ ಹೆಲಿಕಾಪ್ಟರ್ ಮೂಲಕ 11.45ಕ್ಕೆ ಹಾವೇರಿಗೆ ಆಗಮಿಸುವರು. ಸಿಎಂ ಜೊತೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಇರಲಿದ್ದಾರೆ.
ಕಳೆದ ವಾರವಷ್ಟೇ ಜಾತ್ರಾ ಮಹೋತ್ಸವ ನಡೆದ ಹುಕ್ಕೇರಿಮಠಕ್ಕೂ ಭೇಟಿ ನೀಡಲಿರುವ ಸಿಎಂ, ಲಿಂಗೈಕ್ಯ ಶಿವಬಸವ ಮತ್ತು ಶಿವಲಿಂಗಶ್ರೀಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ. ನಂತರ ಮಠಾಧೀಶರಾದ ಸದಾಶಿವ ಶ್ರೀಗಳನ್ನು ಭೇಟಿ ಮಾಡಿ, ಹಾವೇರಿ ಹೊರವಲಯದಲ್ಲಿರುವ ನೇಲೂಗಲ್ ಬಳಿಯ ಸರ್ಕ್ಯೂಟ್ ಹೌಸ್ಗೆ ಅಡಿಗಲ್ಲು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಹಾವೇರಿಯಲ್ಲಿ ನೂತನ ಸರ್ಕ್ಯೂಟ್ ಹೌಸ್ ಉದ್ಘಾಟನೆಯನ್ನೂ ಮಾಡಲಿದ್ದಾರೆ. ಬಳಿಕ ಹಾವೇರಿ ಮೆಡಿಕಲ್ ಕಾಲೇಜು ಉದ್ಘಾಟಿಸಲಿರುವ ಸಿಎಂ ಸಿದ್ದರಾಮಯ್ಯ ಬೃಹತ್ ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ:ಬಿಡಿಎ ಅಂದ್ರೆ ವ್ಯಾಪಾರ, ಬ್ರೋಕರೇಜ್ ಎಂಬ ಕಳಂಕ ಹೋಗಿಸೋದು ನಮ್ಮ ಗುರಿ: ಡಿಕೆಶಿ
ಹಾವೇರಿ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಸತೀಶ್ ಜಾರಕಿಹೊಳಿ, ಹಾವೇರಿ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್, ಸಚಿವ ಹೆಚ್.ಕೆ.ಪಾಟೀಲ್, ಸಚಿವ ಡಾ.ಶರಣಪ್ರಕಾಶ ಪಾಟೀಲ್, ಸಂಸದ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ.

