Monday, October 2, 2023

Latest Posts

ತವರು ಕ್ಷೇತ್ರ ವರುಣಾಕ್ಕೆ ಇಂದು ಸಿಎಂ ಸಿದ್ದರಾಮಯ್ಯ: ಕೃತಜ್ಞತಾ ಸಮಾವೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಭೇರಿ ಸಾಧಿಸಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಸಿಎಂ ಆದ ಬಳಿಕ ಮೊಟ್ಟ ಮೊದಲ ಬಾರಿಗೆ ಇಂದು ತವರು ಕ್ಷೇತ್ರಕ್ಕೆ ಬರಲಿದ್ದಾರೆ. ತನ್ನನ್ನು ಗೆಲ್ಲಿಸಿದ ಜನತೆಗೆ ಸಿದ್ದರಾಮಯ್ಯ ಕೃತಜ್ಞತಾ ಸಮಾವೇಶವನ್ನು ಹಮ್ಮಿಕೊಂಡಿದ್ದಾರೆ.

ಬೆಳಿಗ್ಗೆ 11.30ಕ್ಕೆ ಬೆಂಗಳೂರಿನಿಂದ ಸಿಎಂ ಸಿದ್ದರಾಮಯ್ಯನವರು ಹೊರಟು ಮಧ್ಯಾಹ್ನ 12.20ಕ್ಕೆ ಸುತ್ತೂರು ಹೆಲಿಪ್ಯಾಡ್​ಗೆ ಬರಲಿದ್ದಾರೆ.  12.35ಕ್ಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಮಧ್ಯಾಹ್ನ ಸುತ್ತೂರಿಗೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ಬಳಿಕ ಸಂಜೆ 4 ಗಂಟೆಗೆ ಮೈಸೂರಿನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ, ರಾತ್ರಿ ಮೈಸೂರಿನಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.

ಸಿಎಂ ಆದ ಬಳಿಕ ಸಿದ್ದರಾಮಯ್ಯ ಮೊದಲ ಬಾರಿಗೆ ಸ್ವಕ್ಷೇತ್ರಕ್ಕೆ ಕಾಲಿಡುತ್ತಿದ್ದು, ಜನ ಭಾರೀ ಕೊಡುಗೆ ನಿರೀಕ್ಷೆಯಲ್ಲಿದ್ದಾರೆ. ಈ ಹಿಂದೆ ಚುನಾವಣೆ ವೇಳೆ ನಂಜನಗೂಡು, ಟಿ.ನರಸೀಪುರ ಹಾಗೂ ಮೈಸೂರು ತಾಲೂಕುಗಳಿಗೆ ಹಂಚಿ ಹೋಗಿರುವ ವರುಣಾ ಕ್ಷೇತ್ರವನ್ನ ತಾಲೂಕು ಕೇಂದ್ರ ಮಾಡುವ ಬಗ್ಗೆ ಚರ್ಚೆಯಾಗಿತ್ತು. ಇಂದು ಸಿದ್ದರಾಮಯ್ಯ ಮತದಾರರಿಗೆ ಕೃತಜ್ಞತೆ ಸಲ್ಲಿಸಿ ತಾಲೂಕು ಕೇಂದ್ರ ಘೋಷಣೆ ಮಾಡುತ್ತಾರಾ ಎಂದು ಆ ಭಾಗದ ಜನ ಕಾಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!